ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ (ಎಎಸ್ಐ) ಕರ್ತವ್ಯ ನಿರ್ವಹಿಸುತ್ತಿದ್ದ ನಂದಿನೆರವಂಡ ವಸಂತಕುಮಾರ್ ಅವರು ನವೆಂಬರ್ 12ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ, ನ್ಯಾಯಾಧೀಶರಾಗಿರುವ ಪುತ್ರಿ ದಮಯಂತಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ನವೆಂಬರ್ 13ರಂದು ಕುಶಾಲನಗರದಲ್ಲಿರುವ ಅವರ ಸ್ವಗೃಹದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ವಸಂತಕುಮಾರ್ ಅವರ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಬಂಧುಮಿತ್ರರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *