ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಂಘ-ಸಂಸ್ಥೆಗಳು ಮತ್ತು ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮೂರ್ನಾಡು ಹೋಬಳಿ ಮಟ್ಟದ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಹಬ್ಬದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿದರು.



ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.



ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ, ಗೌರವ ಹಾಗೂ ಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಹಬ್ಬಗಳ ಆಯೋಜನೆ ಶ್ಲಾಘನೀಯವಾಗಿದೆ. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.


