ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತ ಶಾಸಕ ಮಂತರ್ ಗೌಡ

ಶಿಕ್ಷಣ ಪ್ರತಿಯೊಬ್ಬ ಮಗುವಿನ ಹಕ್ಕು. ವಿದ್ಯಾಭ್ಯಾಸ ಇದ್ದಲ್ಲಿ ಇಡೀ ಜಗತ್ತನ್ನೇ ಜಯಿಸಲು ಸಾಧ್ಯ. ಇಂತಹ ಶಾಲೆಗಳಲ್ಲಿ ಕಲಿತು ವಿದ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳನ್ನು ಗಳಿಸಬೇಕು ಅದಕ್ಕಾಗಿ ಪ್ರತಿಯೊಬ್ಬರು ಶಿಕ್ಷಣ ಸಂಸ್ಥೆಗಳಿಗೆ ಗೌರವ ಕೊಟ್ಟು ಅದನ್ನು ಉಳಿಸುವ ಪ್ರಯತ್ನ ಮಾಡಬೇಕೆಂದು ಶಾಸಕ ಮಂತರ್ ಗೌಡ ರವರು ಹೇಳಿದರು.

ಅವರು ಸುಂಟಿಕೊಪ್ಪದ ಏಳನೆಯ ಹೊಸಕೋಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವಂಬರ್ 22ರಂದು ನಡೆದ ಹಿರಿಯ ವಿದ್ಯಾರ್ಥಿ ಬಳಗದ 4 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಶಾಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಹಿರಿಯ ವಿದ್ಯಾರ್ಥಿ ಬಳಗದವರು ಮತ್ತು ಸ್ಥಳೀಯರು ನೀಡುತ್ತಿರುವ ಪ್ರೋತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶಿಕ್ಷಣದ ಅಭಿವೃದ್ಧಿಗಾಗಿ ಶಾಲೆಯಲ್ಲಿ ಎಲ್‌ಕೆಜಿ ಯುಕೆಜಿ ಕಟ್ಟಡ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಭರವಸೆಯನ್ನು ನೀಡಿದರು. ಅಲ್ಲದೆ ನೂತನ ಕಟ್ಟಡ ನಿರ್ಮಾಣದ ಕುರಿತ ನಕ್ಷೆಯನ್ನು ಆದಷ್ಟು ಶೀಘ್ರವಾಗಿ ತಯಾರಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತ ಶಾಸಕರು ವಿದ್ಯಾರ್ಥಿಗಳ ಜೊತೆಗೂಡಿ ಫೋಟೋವನ್ನು ಕ್ಲಿಕ್ಕಿಸಿ ಖುಷಿಪಟ್ಟರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿರುವ ಪಂದ್ಯದಲ್ಲಿ ಭಾಗವಹಿಸಿ ಸೇರಿದ ಜನತೆಯೊಂದಿಗೆ ಸಾಮಾನ್ಯರಾಗಿ ಬೆರೆತರು.

ಶಾಲಾ ಹಿರಿಯ ವಿದ್ಯಾರ್ಥಿ ಬಳಗದ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರು ಹೂಗುಚ್ಚ ನೀಡಿ ಶಾಸಕರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಬಳಗದ ಪ್ರಧಾನ ಕಾರ್ಯದರ್ಶಿ ರಮೇಶ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಚಿನ್ನಪ್ಪ, ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ವಿ ಎಸ್ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಸೋಮಯ್ಯ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೈದಲವಿ ಹೊಸಕೋಟೆ, ಹಿರಿಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳು ಮತ್ತು ಎಸ್ ಡಿ ಎಂ ಸಿ ಸದಸ್ಯರುಗಳು, ಶಾಲಾ ಶಿಕ್ಷಕ ವೃಂದದವರು, ಪೋಷಕ ವೃಂದದವರು, ಕನ್ನಡಪರ ಸಂಘಟನೆಯ ಕಾರ್ಯಕರ್ತರುಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *