ಅಲ್ಪಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಕುಶಾಲನಗರದ ಜೆಡಿಎಸ್ ಮುಖಂಡ ಜಕ್ರಿಯ ಮಾದಾಪುರ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

ನವಂಬರ್ 22ರಂದು ಕೊಡಗು ಜಿಲ್ಲಾ ವೀಕ್ಷಣೆಗೆ ಬಂದಿದ್ದ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಸೋಮವಾರಪೇಟೆಯಲ್ಲಿ ಭೇಟಿ ಮಾಡಿದ ಜಕ್ರಿಯ ಅವರು ಜಿಲ್ಲೆಯಲ್ಲಿ ಹಾಗೂ ಕುಶಾಲನಗರ ಭಾಗದಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ.

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ, ಟಿಕೆಟ್ ಹಾಗೂ ಪಕ್ಷದ ಪದಾಧಿಕಾರಿ ಹುದ್ದೆಗಳಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಸಲ್ಲಿಸಿದರು.

ಮನವಿಯನ್ನು ಸ್ವೀಕರಿಸಿದ ಕುಮಾರಸ್ವಾಮಿ ಅವರು, ಪಕ್ಷದಲ್ಲಿ ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶವಿದೆ. ಅಲ್ಪಸಂಖ್ಯಾತ ಕಾರ್ಯಕರ್ತರ ಶ್ರಮವನ್ನು ಗುರುತಿಸಿ ಸೂಕ್ತ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಜಕ್ರಿಯ ತಿಳಿಸಿದರು.

Leave a Reply

Your email address will not be published. Required fields are marked *