ಮಡಿಕೇರಿ: ಮಡಿಕೇರಿ ತಾಲೂಕು ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಭವನವನ್ನು ಇಂದು ಉದ್ಘಾಟಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದ ಕುಟುಂಬಗಳಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ನಿವೇಶನದ ಹಕ್ಕುಪತ್ರಗಳನ್ನು ವಿತರಿಸಿದರು.


ರಾಜ್ಯ ಸರ್ಕಾರವು ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಇ-ಸ್ವತ್ತು ಹಂಚಿಕೆ ಮಾಡುವ ಭರವಸೆ ನೀಡಿದ ಬಳಿಕ, ಮೊದಲ ಬಾರಿಗೆ ಮಡಿಕೇರಿ ತಾಲೂಕು ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 60 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.
ಪ್ರಕೃತಿ ವಿಕೋಪದಿಂದ ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಅಗತ್ಯ ನೆರವು ಹಾಗೂ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.


ಈ ಸಂದರ್ಭದಲ್ಲಿ ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಸೂರಜ್ ಹೊಸೂರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕ ಇಸ್ಮಾಯಿಲ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಕೆಪಿಸಿಸಿ ಸದಸ್ಯ ಬೇಕಲ್ ರಾಮನಾಥ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್ ಆಲಿ, ವಲಯ ಅಧ್ಯಕ್ಷ ಮಜ್ಜಿಗೆಮನೆ ದೀಪಕ್, ಪಕ್ಷದ ಮುಖಂಡರಾದ ಆಪ್ರು ರವೀಂದ್ರ, ಪಟ್ಟಡ ದೀಪಕ್, ಶೈಯದ್ ಅಲಿವಿ, ಆಗಸ್ಟಿನ್ ಜಯರಾಜ್, ಗಣೇಶ್ ಸೋಮಣ್ಣ, ಜಗದೀಶ್, ಸುಬ್ಬಯ್ಯ, ಸುಬ್ರಮಣಿ, ಶಿವಪ್ರಕಾಶ್ ಹಾಗೂ ವಿಠಲ ಲಿಂಗರಾಜು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.






