ಇನ್ನೋರ್ವ ಬಾಲಕನಿಗಾಗಿ ಮುಂದುವರಿದ ಶೋಧ ಕಾರ್ಯ

ಕಾಪು: ಕಾಪು ಬೀಚ್‌ನಲ್ಲಿ ರವಿವಾರ ಸಮುದ್ರಪಾಲಾಗಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪ ನಿವಾಸಿ ಅಲ್ತಾಫ್ ಅವರ ಪುತ್ರ ಸಮೀರ್ (20) ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ದಾವಣಗೆರೆಯ ಅಹಮ್ಮದಿ ನಗರ ನಿವಾಸಿ ಝಿಯಾವುಲ್ಲಾ ಅವರ ಪುತ್ರ ಮಲಿಕ್ ರಿಹಾನ್ (15) ಗಾಗಿ ಶೋಧ ಕಾರ್ಯ ಮುಂದುವರಿದಿದೆ.

ದಾವಣಗೆರೆಯಿಂದ ಕಾಪು ಬೀಚ್‌ಗೆ ವಿಹಾರಕ್ಕೆಂದು ಬಂದಿದ್ದ 12 ಮಂದಿಯ ತಂಡದಲ್ಲಿದ್ದ ಐವರು ಯುವಕರು ಸಮುದ್ರಕ್ಕೆ ಇಳಿದು ಈಜುತ್ತಿದ್ದರು. ಈ ವೇಳೆ ಮೂವರು ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಜೀವ ರಕ್ಷಕ ದಳದ ಸಿಬ್ಬಂದಿ ಮೂವರ ಪೈಕಿ ಓರ್ವನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿತ್ತು. ಇದೀಗ ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಬಾಲಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Leave a Reply

Your email address will not be published. Required fields are marked *