ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ; ಸುಳ್ಯ ಆಸ್ಪತ್ರೆಗೆ ದಾಖಲು

ಮಡಿಕೇರಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಸಮೀಪದ ದೇವರಕೊಲ್ಲಿ ಬಳಿಯ ಗಾರೆಮುರಿಯಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಬೆಂಗಳೂರಿನ ಯುವಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನವೆಂಬರ್ 23ರಂದು ಸಂಜೆ ನಡೆದಿದೆ.

ಮೃತ ಯುವಕನನ್ನು ಬೆಂಗಳೂರು ಮೂಲದ ನಾಗದೇವನಹಳ್ಳಿ ನಿವಾಸಿ ಪ್ರಸನ್ನ ಅವರ ಪುತ್ರ ದೀಕ್ಷಿತ್ ಎನ್.ಪಿ. (22) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಸುಳ್ಯದ ಕೆಎಂಸಿಸಿ ಆಂಬ್ಯುಲೆನ್ಸ್ ಚಾಲಕ ಹಾರಿಸ್ ಸಂಪಾಜೆ ಅವರು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *