ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ವರ್ಣರಂಜಿತ ವೇದಿಕೆಯಲ್ಲಿ ರಂಜಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
ಸುಂಟಿಕೊಪ್ಪ: 7ನೇ ಹೊಸಕೋಟೆ ಸರಕಾರಿ ಶಾಲಾ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ನಡೆದ 4ನೇ ವರುಷದ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನವಂಬರ್ 22ರಂದು ಸಂಜೆ ಅದ್ದೂರಿ ತೆರೆ ಕಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸಂಘಟನೆಯ ವತಿಯಿಂದ ವಿವಿಧ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.

ಬಳಿಕ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾಕಾರರು ಮತ್ತು ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳು, ನೃತ್ಯಗಳು ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ಪುಟಾಣಿ ಮಕ್ಕಳಿಗೆ ಏರ್ಪಡಿಸಲಾಗಿದ್ದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶುಂಠಿಕೊಪ್ಪ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮ ಅಧ್ಯಾಪಕರಾದ ಶ್ರೀಮತಿ ಲಿಯೋನ ರವರು ಕನ್ನಡ ನಾಡ ನುಡಿಯ ಬಗ್ಗೆ ಮಾತನಾಡಿ ಅರಿವು ಮೂಡಿಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ವಿ ಪಿ ಶಶಿಧರ್, ಶ್ರೀ ಕ್ಷೇತ್ರ ಧರ್ಮಸ್ಥಳ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ನಿರ್ಮಲಾ ಪ್ರಕಾಶ್, ಉದ್ಯಮಿಗಳಾದ ಕೂರ್ಗ್ ಬ್ಲಾಸಮ್ ರೆಸಾರ್ಟ್ ಮಾಲಕ ಸಜಿ ವಿ ಎಸ್, ಕೂರ್ಗ್ ಕೌಂಟ್ರಿ ಮಾಲಕ ಸಜಿಂತ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶ್ರೀನಿವಾಸ್, 7ನೇ ಹೊಸಕೋಟೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರಮೇಶ್, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ಸೈದಲವಿ, ಶ್ರೀಮತಿ ಜ್ಯೋತಿ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಮೇಶ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಸೋಮಯ್ಯ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಚಿನ್ನಪ್ಪ, ಹಾಗೂ ಶಾಲೆಯ ಶಿಕ್ಷಕ ವೃಂದದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಸೋಮಯ್ಯ ರವರು ಕಾರ್ಯಕ್ರಮ ನಿರೂಪಿಸಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಚಿನ್ನಪ್ಪ ಸ್ವಾಗತಿಸಿ ಶಿಕ್ಷಕರಾದ ರಾಧಾಕೃಷ್ಣ ಕೆ ಬಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಹಾಯ ನಿಧಿಗಾಗಿ ಆಯೋಜಿಸಿದ ಲಕ್ಕಿ ಕೂಪನ್ ನ ಡ್ರಾ ನಡೆದು ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.










