ನೆಲ್ಯಹುದಿಕೇರಿ: ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಜ್ಯೋತಿ ಮಿಂಜ್ ಅವರು ಫುಟ್ಬಾಲ್ ಪಂದ್ಯಾವಳಿಗೆ ಹಾಗೂ ವಿದ್ಯಾರ್ಥಿ ಜಾಸರ್ ಇ.ಜೆ. ಅವರು 200 ಮೀಟರ್ ಓಟದ ಸ್ಪರ್ಧೆಗೆ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಕ್ರೀಡಾ ವ್ಯವಸ್ಥಾಪಕ ಧನಂಜಯ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಅಂಥೋಣಿ ವಿವಿಯನ್ ಅಲ್ವಾರೀಶ್ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ಸ್ಪರ್ಧೆಗಳಿಗೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *