ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿ ವಸೂಲಿ ಸ್ಥಗಿತಗೊಳಿಸುವಂತೆ ಆಗ್ರಹ

ಬ್ರಹ್ಮರಕೊಟ್ಲು: ಉಪ್ಪಿನಂಗಡಿ ಸಮೀಪದ ವಳಾಲುನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟೋಲ್ ಗೇಟ್‌ನಲ್ಲಿ ಟೋಲ್ ವಸೂಲಿ ಆರಂಭವಾಗುತ್ತಿದ್ದಂತೆ, ಬ್ರಹ್ಮರಕೊಟ್ಲು ಟೋಲ್ ಗೇಟ್ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತವಾಗಿದೆ.

ವಳಾಲು ಟೋಲ್ ಗೇಟ್‌ನಲ್ಲಿ ವಸೂಲಿ ಆರಂಭಗೊಂಡ ಬೆನ್ನಲ್ಲೇ SDPI ಮುಖಂಡರು ಹಾಗೂ ಕಾರ್ಯಕರ್ತರು ಬ್ರಹ್ಮರಕೊಟ್ಲು ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬ್ರಹ್ಮರಕೊಟ್ಲು ಟೋಲ್ ಗೇಟ್‌ನಲ್ಲಿ ನಡೆಯುತ್ತಿರುವ ಟೋಲ್ ವಸೂಲಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿದರು.

ವಳಾಲುನಲ್ಲಿ ಈಗಾಗಲೇ ನೂತನ ಟೋಲ್ ಗೇಟ್ ಕಾರ್ಯಾರಂಭಗೊಂಡಿರುವಾಗ, ಬ್ರಹ್ಮರಕೊಟ್ಲು ಟೋಲ್ ಗೇಟ್‌ನಲ್ಲಿ ವಸೂಲಿ ಮುಂದುವರಿಸುವುದರ ಔಚಿತ್ಯವೇನು ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಟೋಲ್ ವಸೂಲಾತಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು.

Leave a Reply

Your email address will not be published. Required fields are marked *