ವಳಾಲು ಟೋಲ್ ಆರಂಭದ ಬೆನ್ನಲ್ಲೇ ಪ್ರತಿಭಟನೆ; ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಆಗ್ರಹ

ಬ್ರಹ್ಮರಕೂಟ್ಲು: ಉಪ್ಪಿನಂಗಡಿ ಸಮೀಪದ ವಳಾಲಿನಲ್ಲಿ ನೂತನ ಟೋಲ್ ಪ್ಲಾಝಾ ಕಾರ್ಯಾರಂಭಗೊಂಡ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ SDPI ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ವಳಾಲು ಟೋಲ್ ಪ್ಲಾಝಾದಲ್ಲಿ ಶುಲ್ಕ ವಸೂಲಿ ಆರಂಭಗೊಂಡ ಹಿನ್ನೆಲೆಯಲ್ಲಿ SDPI ಮುಖಂಡರು ಹಾಗೂ ಕಾರ್ಯಕರ್ತರು ಬ್ರಹ್ಮರಕೂಟ್ಲು ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಮುಂದುವರಿದಿರುವ ಶುಲ್ಕ ವಸೂಲಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿದರು.

ವಳಾಲಿನಲ್ಲಿ ನೂತನ ಟೋಲ್ ಪ್ಲಾಝಾ ಕಾರ್ಯಾರಂಭಗೊಂಡಿರುವಾಗ ಬ್ರಹ್ಮರಕೂಟ್ಲು ಟೋಲ್‌ನಲ್ಲಿ ಶುಲ್ಕ ವಸೂಲಿ ಮುಂದುವರಿಸುವುದರ ಔಚಿತ್ಯವೇನು ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ತಕ್ಷಣ ಟೋಲ್ ವಸೂಲಾತಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ SDPI ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *