ಸಂವಿಧಾನದ ಪೀಠಿಕೆ ವಾಚನ, ಪ್ರತಿಜ್ಞಾವಿಧಿ ಸ್ವೀಕಾರ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

ನಂತರ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ, ಅಪರ ಜಿಲ್ಲಾಧಿಕಾರಿ ಜಯಲಕ್ಷ್ಮಿ, ಯುವಜನ ಸಮನ್ವಯಾಧಿಕಾರಿ ಭಾಗೀರಥಿ, ಮಡಿಕೇರಿ ತಾಲೂಕು ತಹಶೀಲ್ದಾರ್ ಶ್ರೀಧರ್, ಕುಶಾಲನಗರ ತಾಲೂಕು ತಹಶೀಲ್ದಾರ್ ರಮೇಶ್ ಬಾಬು ಹಾಗೂ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಗಾಯತ್ರಿ ಅವರು ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಲಾಯಿತು.

Leave a Reply

Your email address will not be published. Required fields are marked *

You missed