ಬೆಂಗಳೂರು: AIKMCC ಬೆಂಗಳೂರು ವತಿಯಿಂದ ಸೆಪ್ಟೆಂಬರ್ 6ರಂದು ಆಯೋಜಿಸಲಾಗಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.

ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಹಲವು

ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವದಂಪತಿಗಳಿಗೆ ಶುಭ ಹಾರೈಸಲಿದ್ದಾರೆ.

ಇದೇ ಸಂದರ್ಭದಲ್ಲಿ AIKMCC ಬೆಂಗಳೂರು ವತಿಯಿಂದ ರೂಪಿಸಲಾಗಿರುವ  ‘ಎಮೆರ್ಜೆನ್ಸಿ ಫೋರ್ಸ್’ ನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನೆರವು ನೀಡುವುದು, ಅಗತ್ಯ ಸಂದರ್ಭದಲ್ಲಿ ಸೇವಾ ಚಟುವಟಿಕೆಗಳನ್ನು ತ್ವರಿತವಾಗಿ ಕೈಗೊಳ್ಳುವುದು ಹಾಗೂ

ಸಮಾಜಮುಖಿ ಕಾರ್ಯಗಳಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 6ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಸಾಮೂಹಿಕ ವಿವಾಹದ ಮೂಲಕ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಸಮಾಜ ಸೇವೆಯ ಸಂದೇಶವನ್ನು ಸಾರುವ ಉದ್ದೇಶವನ್ನು AIKMCC ಹೊಂದಿದೆ.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

Leave a Reply

Your email address will not be published. Required fields are marked *