ಕೊಡಗು: ನೆಲ್ಲಿಹುದಿಕೇರಿ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆ ಹಾಗೂ ಹೆಚ್ಚುತ್ತಿರುವ ಪಾರ್ಕಿಂಗ್ ಸಮಸ್ಯೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಸ್ವಾಭಿಮಾನಿ ಬಣದ ವತಿಯಿಂದ ಶಾಸಕ ಶ್ರೀ ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.

ನೆಲ್ಲಿಹುದಿಕೇರಿ ಭಾಗದ ಪ್ರಮುಖ ರಸ್ತೆಗಳು ಹದಗೆಟ್ಟಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕೆಸರು ಉಂಟಾಗಿ ಸಂಚಾರಕ್ಕೆ ಮತ್ತಷ್ಟು ಸಮಸ್ಯೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದರ ಜೊತೆಗೆ ವ್ಯಾಪ್ತಿಯಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ.
ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಸ್ತೆ ದುರಸ್ತಿ, ಗುಂಡಿಗಳ ಮುಚ್ಚುವಿಕೆ ಹಾಗೂ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಕ.ರ.ವೇ ಸ್ವಾಭಿಮಾನಿ ಬಣದ ಮುಖಂಡರು ಶಾಸಕರಲ್ಲಿ ಮನವಿ ಮಾಡಿದರು. ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಶಾಸಕರು ನೀಡಿದರು.


