ಕಳoಜಿಬೈಲ್‌  ಡಿಡಿ ಬಾಯ್ಸ್ (DD Boys) ಮತ್ತು ಕೂಲ್ ಬಾಯ್ಸ್ (Cool Boys) ತಂಡಗಳ ವತಿಯಿಂದ 4ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲಾಗಿದೆ. ಪಂದ್ಯಾಟವು 2027ರ ಜನವರಿ 2ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಪಂದ್ಯಾಟದಲ್ಲಿ ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನಗಳನ್ನು ಘೋಷಿಸಲಾಗಿದೆ. ಪ್ರಥಮ ಬಹುಮಾನವಾಗಿ ₹15,001, ದ್ವಿತೀಯ ಬಹುಮಾನವಾಗಿ ₹10,001 ಹಾಗೂ ತೃತೀಯ ಮತ್ತು ನಾಲ್ಕನೇ ಬಹುಮಾನವಾಗಿ ತಲಾ ₹5,001 ನೀಡಲಾಗುವುದು.

ಕ್ರೀಡಾಸಕ್ತರು ಹಾಗೂ ಕಬಡ್ಡಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾಟವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *