ಪೆರ್ನೆ: ಮೈರಕಟ್ಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಬಾವಿಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಹೆಣ್ಣು ಮಗು ರಬೀಹ್ ಮೃತಪಟ್ಟಿದ್ದು, ಮತ್ತೊಂದು ಮಗು ಆಲಿಯಾ (4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.

ಮಾಹಿತಿಯ ಪ್ರಕಾರ, ಬಾವಿಗೆ ಬಿದ್ದ ಆಲಿಯಾಳನ್ನು ಗಮನಿಸಿದವರು ತಕ್ಷಣ ರಕ್ಷಣೆ ಮಾಡಿದ್ದಾರೆ. ಬಳಿಕ ಆಲಿಯಾ ನೀಡಿದ ಮಾಹಿತಿಯ ಮೇರೆಗೆ ಮತ್ತೊಂದು ಮಗು ರಬೀಹ್ ಕೂಡ ಬಾವಿಗೆ ಬಿದ್ದಿರುವುದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಿಂದ ಸ್ಥಳೀಯರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *