ಸುಳ್ಯ: ಮಂಗಳೂರಿನಿಂದ ಕಲ್ಲುಗುಂಡಿ ಕಡೆಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಗುಣಡ್ಕ ಸಮೀಪ ಬಸ್‌ನಲ್ಲಿ ಏಕಾಏಕಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಘಟನೆ ನಡೆದಿದೆ.
ಮಹಿಳೆಯ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್‌ನ್ನು ಕಲ್ಲುಗುಂಡಿಯಲ್ಲಿ ನಿಲ್ಲಿಸಿ, ತಕ್ಷಣ ಸ್ಥಳೀಯರ ನೆರವಿನಿಂದ ಆಕೆಯನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಮಯೋಚಿತವಾಗಿ ಬಸ್ ನಿಲ್ಲಿಸಿ ಆಸ್ಪತ್ರೆಗೆ ಸಾಗಿಸಲು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಮಹಿಳೆಗೆ ತುರ್ತು ವೈದ್ಯಕೀಯ ನೆರವು ದೊರೆತಿದೆ. ಮಹಿಳೆಯ ಆರೋಗ್ಯ ಸ್ಥಿತಿ ಹಾಗೂ ಆಕೆಗೆ ಉಂಟಾದ ಆರೋಗ್ಯ ಸಮಸ್ಯೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
