ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದಲ್ಲಿ ಆರೋಪಿಗಳಾಗಿರುವ ಉಚ್ಛಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ ಬೆಂಗಳೂರಿನ 66ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಇಂದು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.

ತನಿಖೆಗೆ ಸಹಕರಿಸುವಂತೆ ನ್ಯಾಯಾಲಯದ ಷರತ್ತು

ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯ ಅರ್ಜಿದಾರರಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ.

  • ತನಿಖಾಧಿಕಾರಿಗಳು (IO) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದಾಗ ಅರ್ಜಿದಾರರು ಕಡ್ಡಾಯವಾಗಿ ಹಾಜರಾಗಿ ತನಿಖೆಗೆ ಸಹಕರಿಸಬೇಕು.
  • ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕುವಂತಿಲ್ಲ.
  • ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಥವಾ ತನಿಖೆಗೆ ಅಡ್ಡಿಪಡಿಸುವ ಯಾವುದೇ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಾರದು.

ನ್ಯಾಯಾಲಯದ ಈ ಆದೇಶದಿಂದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರಿಗೆ ತಾತ್ಕಾಲಿಕ ನಿರಾಳತೆ ದೊರೆತಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳ ಮೇಲೆ ಕುತೂಹಲ ಮೂಡಿದೆ.

Leave a Reply

Your email address will not be published. Required fields are marked *