ಕೊಡಗಿನ ಸೋಮವಾರಪೇಟೆ ಮೂಲದ ಬೈಕ್ ಸವಾರ ಸಾವು

ಸುಬ್ರಹ್ಮಣ್ಯ :ಕೈಕಂಬ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನವಂಬರ್ 26ರಂದು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತಿದ್ದ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದರು.

ಕೂಡಲೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ನಡುವೆ ಸವಾರ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಡಿಕ್ಕಿ ಆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆ ಮತ್ತು ಕೈಕಾಲಿಗೆ ಗಂಭೀರ ಗಾಯವಾಗಿದ್ದವು. ಘಟನೆಯಿಂದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನ ಮುಂಭಾಗವು ಕೂಡ ಜಖಂಗೊಂಡಿದೆ.
















