ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 235/2016 ಮಾನ್ಯ ನ್ಯಾಯಾಲಯದ ಸಿ.ಸಿ ನಂಬ್ರ 191/2021 ರಲ್ಲಿ ಆರೋಪಿತನಾದ ಜಿಮ್ಮಿ @ಜಿಂಕೆ ಜಿಮ್ಮಿ @ಪೈಜಲ್ @ಮಹಮ್ಮದ್ ಪೈಜಲ್ ಎಂಬಾತ ದರೋಡೆ ಮತ್ತು ಕಳವು ಪ್ರಕರಣದ ಆರೋಪಿಯಾಗಿದ್ದು ಈತ ಸುಮಾರು 5 ವರ್ಷಗಳಿಂದ ನ್ಯಾಯಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ.

ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು ನವಂಬರ್ 24ರಂದು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ಆರೋಪಿತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ವಿವಿಧ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿರುತ್ತದೆ.

Leave a Reply

Your email address will not be published. Required fields are marked *