ಬೆಂಗಳೂರು: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಯುವತಿ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಉಮ್ಮಡಹಳ್ಳಿ ಗೇಟ್ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಅಂಜನಾ (32) ಎಂದು ಗುರುತಿಸಲಾಗಿದೆ.
ಅತಿವೇಗದಲ್ಲಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ವರದಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಅಪಘಾತದ ವೇಳೆ ಕಾರಿನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
