ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ನೆಕ್ಕರೆ ಬಳಿ ನ. 14ರ ಮುಂಜಾನೆ ನೆಕ್ಸಾನ್ ಕಾರು ಮತ್ತು ಹಣ್ಣು ಸಾಗಾಟದ ಗೂಡ್ಸ್ ವಾಹನ (ಜೀತ್ ಫೂಟ್ಸ್) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಡಬದ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.



ಮೃತರನ್ನು ಕಳಾರ ಕೊರಂತ್ತಿಲ್ ನಿವಾಸಿ ಮೊಹಮ್ಮದ್ ರಫೀಕ್ ಅವರ ಪುತ್ರ ತಮೀಮ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಳಾರ ನಿವಾಸಿ ಖಲೀಲ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.



ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ. ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.



ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

