ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ನಿಗಮಗಳು, ಮಂಡಳಿಗಳು ಹಾಗೂ ಅಭಿವೃದ್ಧಿ ಪ್ರಾಧಿಕಾರಗಳ ನಿರ್ದೇಶಕರು ಮತ್ತು ಸದಸ್ಯರ ನೇಮಕ ಮಾಡಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಡಳಿತಾತ್ಮಕ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರನ್ನು ನಿಯೋಜಿಸಿದೆ. ಸಂಪೂರ್ಣ ಪಟ್ಟಿ ಇಲ್ಲಿದೆ.
ಬೆಂಗಳೂರು: ಉಪ ಚುನಾವಣೆ ಮತ್ತು ಸ್ಥಳೀಯ ಚುನಾವಣೆಗೂ ಮುನ್ನ ಕಾರ್ಯಕರ್ತರಿಗೆ ಕಾಂಗ್ರೆಸ್ ಗುಡ್‌ನ್ಯೂಸ್ ನೀಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಿಗಳಿಗೆ 425 ಮಂದಿ ನಿರ್ದೇಶಕರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯವರ ಟಿಪ್ಪಣಿ ಆದೇಶದ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜಂಟಿ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಅನಧಿಕೃತ ಟಿಪ್ಪಣಿ ರವಾನಿಸಿದ್ದು, ಪಟ್ಟಿಯಲ್ಲಿರುವವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆಯಾ ನಿಗಮ-ಮಂಡಳಿಗಳಿಗೆ ಅಧಿಕೃತವಾಗಿ ನೇಮಿಸಿ ಆದೇಶ ಹೊರಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
