ಮಡಿಕೇರಿ : ಸಂಪಾಜೆ ಹೋಬಳಿಯಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಹಾಗೂ ನಿರಂತರ ಗುಣಮಟ್ಟದ

ವಿದ್ಯುತ್ ಸರಬರಾಜು ಕಲ್ಪಿಸುವ ಉದ್ದೇಶದಿಂದ 33/11 ಕೆವಿ ವಿದ್ಯುತ್ ಪ್ರಸರಣ ಕೇಂದ್ರ ಸ್ಥಾಪಿಸಲು ಸಂಪಾಜೆ ಕೊಯನಾಡು ಚಡಾವು ಬಳಿ ಭೂಮಿಪೂಜೆ ನೆರವೇರಿಸಲಾಯಿತು.
ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಬಳಿಕ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
