ಬೆಂಗಳೂರು: ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟದ (KRMO) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 9ರಂದು ನಡೆಯಬೇಕಿದ್ದ ಸಾರ್ವಜನಿಕ ಸಭೆ ಮತ್ತು ಶಾಂತಿಯುತ ಪ್ರತಿಭಟನೆಯನ್ನು ಅನಿವಾರ್ಯ ಕಾರಣಗಳಿಂದ ನವೆಂಬರ್ 12ಕ್ಕೆ ಮುಂದೂಡಲಾಗಿದೆ.

ಈ ಹಿಂದೆ ನವೆಂಬರ್ 9ರಂದು ಬೆಳಿಗ್ಗೆ 10.30ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವು ಇದೀಗ ಗುರುವಾರ, ನವೆಂಬರ್ 12ರಂದು ಬೆಳಿಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದ ದಿನಾಂಕದಲ್ಲಿ ಮಾತ್ರ ಬದಲಾವಣೆ ಮಾಡಲಾಗಿದ್ದು, ಸಭೆ ಮತ್ತು ಪ್ರತಿಭಟನೆಯ ಉದ್ದೇಶಗಳು ಹಾಗೂ ಇತರ ವಿಷಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.

ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಪರಿಷ್ಕೃತ ದಿನಾಂಕವನ್ನು ಗಮನಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಒಕ್ಕೂಟ ಮನವಿ ಮಾಡಿದೆ.

ಸಮಾನತೆ, ನ್ಯಾಯ ಮತ್ತು ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗಾಗಿ ನಡೆಯುವ ಈ ಸಾಮೂಹಿಕ ಪ್ರಯತ್ನಕ್ಕೆ ಎಲ್ಲರ ಬೆಂಬಲ ಮತ್ತು ಭಾಗವಹಿಸುವಿಕೆ ಅಗತ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಿನಾಂಕ ಬದಲಾವಣೆಯಿಂದ ಸಾರ್ವಜನಿಕರಿಗೆ ಉಂಟಾಗುವ ಅನಾನುಕೂಲತೆಗೆ ಒಕ್ಕೂಟ ವಿಷಾದ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *