ಕುಶಾಲನಗರ: ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು 11 ವರ್ಷದ ಬಾಲಕನೊಬ್ಬ ಮೃತಪಟ್ಟ ಹೃದಯವಿದ್ರಾವಕ ಘಟನೆ ನ. 13ರಂದು ಕೊಪ್ಪದ ಮಾನಸಪೊನ್ನಪ್ಪ ಲೇಔಟ್‌ನಲ್ಲಿ ನಡೆದಿದೆ.

ಮೃತ ಬಾಲಕನನ್ನು ಚಿರಂತ್ ಎಂದು ಗುರುತಿಸಲಾಗಿದೆ. ಇವರು ಕೊಪ್ಪ ಗ್ರಾಮದ ಕಟ್ಟಡ ಗುತ್ತಿಗೆದಾರ ಅರುಣ್ ಅವರ ಪುತ್ರ. ಮಡಿಕೇರಿಯ ನವೋದಯ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಚಿರಂತ್, ರಜೆ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದರು.

ನ. 13ರಂದು ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಜಾರಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಮನೆಯವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬಾಲಕನ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕ ಆವರಿಸಿದೆ.

Leave a Reply

Your email address will not be published. Required fields are marked *