ಸುಳ್ಯ: ಸಮಾಜ ಸೇವಾ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡಿರುವ ಸುಳ್ಯ ಆಂಬುಲೆನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ನವೆಂಬರ್ 25ರಂದು 5ನೇ ವರ್ಷದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.


ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನಡೆಯಲಿರುವ ಈ ಶಿಬಿರವು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಸುಳ್ಯ ತಾಲೂಕು ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಜರುಗಲಿದೆ.


ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.






