ನೆಲ್ಯಹುದಿಕೇರಿ: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಬಳಸಿದ್ದಾರೆ ಎನ್ನಲಾದ ‘ಹಳ್ಳಿ ಗುಗ್ಗು’ ಎಂಬ ಪದಪ್ರಯೋಗಕ್ಕೆ ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಉಪಾಧ್ಯಕ್ಷ ಶಿಯಾಬುದ್ದೀನ್ ವಿಪಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಸಾರ್ವಜನಿಕವಾಗಿ ಇಂತಹ ಪದಗಳನ್ನು ಬಳಸುವುದು ರಾಜಕೀಯ ಸಂಸ್ಕೃತಿಗೆ ಶೋಭೆ ತರುವುದಿಲ್ಲ ಎಂದು ಅವರು ಖಂಡಿಸಿದ್ದಾರೆ.

ಈ ಕುರಿತು ಖಂಡನಾ ಹೇಳಿಕೆ ಬಿಡುಗಡೆ ಮಾಡಿರುವ ಶಿಯಾಬುದ್ದೀನ್, ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ರೈತರ ಪರವಾಗಿ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಿರುವ ನಾಯಕರು. ಅಂತಹ ನಾಯಕರ ವಿರುದ್ಧ ವೈಯಕ್ತಿಕ ನಿಂದನೆಗೆ ಇಳಿಯುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗೃಹ ಇಲಾಖೆಯ ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ ಖರ್ಗೆ ಅವರು ಸಾರ್ವಜನಿಕವಾಗಿ ಮಾತನಾಡುವಾಗ ಕನಿಷ್ಠ ರಾಜಕೀಯ ಸಭ್ಯತೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಬೇಕು. ವೈಯಕ್ತಿಕ ಟೀಕೆಗಳ ಮೂಲಕ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸುವುದು ಸರಿಯಾದ ನಡೆ ಅಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದ ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗುವ ನಾಯಕರನ್ನು ವೈಯಕ್ತಿಕ ನಿಂದನೆಗಳ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಇಂತಹ ರಾಜಕೀಯ ಬೆಳವಣಿಗೆಗಳನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಶಿಯಾಬುದ್ದೀನ್ ತಿಳಿಸಿದ್ದಾರೆ.

ಪ್ರಿಯಾಂಕ ಖರ್ಗೆ ಕ್ಷಮೆಯಾಚಿಸಲಿ: ಶಿಯಾಬುದ್ದೀನ್ ಆಗ್ರಹ

ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಬಳಸಿರುವ ಅವಹೇಳನಕಾರಿ ಪದಪ್ರಯೋಗಕ್ಕೆ ಸಚಿವ ಪ್ರಿಯಾಂಕ ಖರ್ಗೆ ಅವರು ಕೂಡಲೇ ಕ್ಷಮೆಯಾಚಿಸಬೇಕು. ಕುಮಾರಸ್ವಾಮಿ ಅವರ ಬಳಿಯೂ ಹಾಗೂ ನಾಡಿನ ಜನತೆಯ ಬಳಿಯೂ ಕ್ಷಮೆ ಕೇಳಬೇಕು ಎಂದು ಶಿಯಾಬುದ್ದೀನ್ ವಿಪಿಎಸ್ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *