ಕೊಡಗು : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ಬೈಪಾಸ್ ರಸ್ತೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ನೀಡಲಾಗಿದೆ.

ಶಾಸಕ ಎ.ಎಸ್. ಪೊನ್ನಣ್ಣ ಅವರ ಮೇಲ್ವಿಚಾರಣೆಯಲ್ಲಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಸುಗಮ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಬೈಪಾಸ್ ರಸ್ತೆ ಅಭಿವೃದ್ಧಿಯಿಂದ ಗೋಣಿಕೊಪ್ಪ ಪಟ್ಟಣದ ಸಂಚಾರ ದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದ್ದು, ಸ್ಥಳೀಯ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *