ದಾನಿಗಳ ಸಹಕಾರದಿಂದ ವಾಹನ ಖರೀದಿ | ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳ ಮಾದರಿ ಕೊಡುಗೆ
ಸುಂಟಿಕೊಪ್ಪ: ದಾನಿಗಳ ಸಹಕಾರದೊಂದಿಗೆ ಏಳನೆಯ ಹೊಸಕೋಟೆ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ಶಾಲೆಗೆ ಕೊಡುಗೆಯಾಗಿ ನೀಡಲಾದ ನೂತನ ಶಾಲಾ ವಾಹನದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ರಜ್ಜಾಕ್ ವಹಿಸಿದ್ದರು. ಸ್ಥಳೀಯ ಉದ್ಯಮಿಗಳು ಹಾಗೂ ಕೂರ್ಗ್ ಆರೆಂಜ್ ಬ್ಲಾಸಂ ಸಂಸ್ಥೆಯ ಮಾಲಕರಾದ ಸಜಿ ಥಾಮಸ್ ಅವರು ನೂತನ ವಾಹನವನ್ನು ಉದ್ಘಾಟಿಸಿದರು.



ಕಾರ್ಯಕ್ರಮದಲ್ಲಿ ಸಿ.ಜೆ. ಬಿಲ್ಡ್ವೇರ್ ಸಂಸ್ಥೆಯ ವ್ಯವಸ್ಥಾಪಕ ಅನಿಲ್, ಹಿರಿಯ ವಿದ್ಯಾರ್ಥಿ ಬಳಗದ ಪ್ರಧಾನ ಕಾರ್ಯದರ್ಶಿ ರಮೇಶ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಚಿನ್ನಪ್ಪ, ಎಸ್ಡಿಎಂಸಿ ಅಧ್ಯಕ್ಷೆ ಜ್ಯೋತಿ ವಿ.ಎಸ್., ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ, ಎಸ್ಡಿಎಂಸಿ ಅಧ್ಯಕ್ಷ ಸೈದಲವಿ ಹೊಸಕೋಟೆ ಸೇರಿದಂತೆ ಹಿರಿಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳು, ಎಸ್ಡಿಎಂಸಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.



ಈ ಸಂದರ್ಭದಲ್ಲಿ ಮಾತನಾಡಿದ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ ಅವರು, ಶಾಲೆಯ ಅಭಿವೃದ್ಧಿಗಾಗಿ ಹಿರಿಯ ವಿದ್ಯಾರ್ಥಿ ಬಳಗವು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಶ್ಲಾಘಿಸಿದರು. ಸಂಘಟನೆಯ ಸದಸ್ಯರಲ್ಲಿರುವ ಹೊಸ ಆಲೋಚನೆಗಳು ಹಾಗೂ ಶಾಲೆಯ ಅಭಿವೃದ್ಧಿಗಾಗಿ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.



ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಚಿನ್ನಪ್ಪ ಸ್ವಾಗತಿಸಿದರು. ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ ವಂದಿಸಿದರು.



ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ನೂತನ ಶಾಲಾ ವಾಹನವು ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಯ ಉಳಿವು ಹಾಗೂ ಅಭಿವೃದ್ಧಿಯ ಉದ್ದೇಶದಿಂದ ಹಿರಿಯ ವಿದ್ಯಾರ್ಥಿ ಬಳಗವು ಹಲವು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಿದ್ದು, ಗ್ರಾಮದಲ್ಲಿ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ.
