ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಉದ್ಯೋಗಾವಕಾಶ – 7 ಖಾಸಗಿ ಕಂಪನಿಗಳಿಂದ ನೇಮಕಾತಿ
ಸೋಮವಾರಪೇಟೆ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ವತಿಯಿಂದ ನವೆಂಬರ್ 13ರಂದು ಸೋಮವಾರಪೇಟೆಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ.


ಈ ಉದ್ಯೋಗ ಮೇಳದಲ್ಲಿ ಮೈಸೂರಿನ ಆಟೋಲಿವ್ ಎಂಎನ್‌ಸಿ ಕಂಪನಿ, ರನಿ ಮದ್ರಾಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರಿನ ಅಕ್ಸರ್ ಸೆಕ್ಯೂರಿಟಿ ಕಂಪನಿ, ಮಂಗಳೂರಿನ ಡಾಬೇರ್ಮನ್ ಸೆಕ್ಯೂರಿಟಿ ಸೊಲ್ಯೂಷನ್ ಏಜೆನ್ಸಿ, ಮೈಸೂರಿನ ಜೆಕೆ ಟೈಯರ್ಸ್, ಮಡಿಕೇರಿಯ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಹಾಗೂ ಕುಶಾಲನಗರದ ಪೀರಾಮಲ್ ಫೈನಾನ್ಸ್ ಲಿಮಿಟೆಡ್ ಸೇರಿದಂತೆ ಏಳು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ.


ಈ ಸಂಸ್ಥೆಗಳು ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.
ಯಾರಿಗೆ ಉದ್ಯೋಗಾವಕಾಶ?
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗಾವಕಾಶ ಪಡೆದುಕೊಳ್ಳಬಹುದಾಗಿದೆ.


ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ
ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳು, ಸ್ವವಿವರಗಳ ಪ್ರತಿಗಳು (ರೆಸ್ಯೂಮ್) ಹಾಗೂ ಅನ್ವಯಿಸುವ ಅಭ್ಯರ್ಥಿಗಳು ಅನುಭವ ಪ್ರಮಾಣಪತ್ರದೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





