ಸುಳ್ಯ: ಉಬರಡ್ಕ ಕ್ರಾಸ್ ರಸ್ತೆ ಪರಿವಾರ ಕಾನ ಸಮೀಪದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ.
ಮೃತರನ್ನು ಗಂಗಾಧರ ಟೈಲರ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸ್ ತನಿಖೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಲಿವೆ.
