ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಿಂದ ಮಹತ್ವದ ತೀರ್ಪು

ಮಡಿಕೇರಿ: ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಓಂಕಾರಪ್ಪ ಅಲಿಯಾಸ್ ಪ್ರಕಾಶ್‌ಗೆ ಮರಣದಂಡನೆ ಶಿಕ್ಷೆ ವಿಧಿಸಿ ಮಡಿಕೇರಿಯ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

2024ರ ಮೇ 9ರಂದು ಸೂರ್ಲಬ್ಬಿಯಲ್ಲಿ ನಡೆದಿದ್ದ ಈ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಾಲಕಿಯ ರುಂಡವನ್ನು ಕಡಿದು ಅಮಾನುಷವಾಗಿ ಹತ್ಯೆ ಮಾಡಲಾಗಿತ್ತು. ತಾನು ಪ್ರೀತಿಸುತ್ತಿದ್ದ ಬಾಲಕಿಯನ್ನು ಆರೋಪಿ ಭೀಕರವಾಗಿ ಕೊಲೆಗೈದಿದ್ದ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಘಟನೆ ನಡೆದು ಸುಮಾರು ಎರಡು ವರ್ಷ ಆರು ತಿಂಗಳ ಬಳಿಕ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದೆ. ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಈ ಭೀಕರ ಹತ್ಯೆ ಪ್ರಕರಣದಲ್ಲಿ ಕೊನೆಗೂ ಶಿಕ್ಷೆ ಪ್ರಕಟಗೊಂಡಿದೆ.

Leave a Reply

Your email address will not be published. Required fields are marked *