ಎರಡೂ ವಾಹನಗಳು ಜಖಂ; ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರು
ಮಡಿಕೇರಿ: ಮಡಿಕೇರಿ ಸಮೀಪದ ದೇವರಕೊಲ್ಲಿ ಬಳಿ ತಿರುವಿನಲ್ಲಿ ತಾರ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾರ್ ವಾಹನ ರಸ್ತೆಯಲ್ಲೇ ಪಲ್ಟಿಯಾದ ಘಟನೆ ನವೆಂಬರ್ 24ರಂದು ಮಧ್ಯಾಹ್ನ ನಡೆದಿದೆ.
ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ತಾರ್ ವಾಹನ ಹಾಗೂ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು, ತಾರ್ ವಾಹನ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಅಪಘಾತದ ತೀವ್ರತೆಯನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ.



ಆದರೆ ಅದೃಷ್ಟವಶಾತ್ ಎರಡೂ ವಾಹನಗಳಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.



ದೇವರಕೊಲ್ಲಿ ಬಳಿಯ ತಿರುವಿನಲ್ಲಿ ಸಂಭವಿಸಿದ ಈ ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.





